ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಇಂದು ಬೆಂಗಳೂರು ನಗರ-ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ನವೆಂಬರ್ 5ರವರೆಗೆ ರಾಜ್ಯದಲ್ಲಿ ಬಿರುಗಾಳಿ ಮತ್ತು ಮಿಂಚಿನ ಸಾಧ್ಯತೆ ಇದೆ.

ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Nov 02, 2026 | 6:22 AM

ಮುಖ್ಯಾಂಶಗಳು

  • ಬೆಂಗಳೂರು ಸೇರಿ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
  • ನವೆಂಬರ್ 5ರವರೆಗೆ ಬಿರುಗಾಳಿ, ಗುಡುಗು-ಮಿಂಚಿನ ಸಾಧ್ಯತೆ
  • ಕರಾವಳಿ ಸೇರಿ ರಾಜ್ಯದ ಹಲವೆಡೆ ಮಳೆ

ಬೆಂಗಳೂರು, ನವೆಂಬರ್ 2: ಚಳಿ ಆರಂಭದ ಮುನ್ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಇದೀಗ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಗುಡುಗು-ಮಿಂಚಿನ ವಾತಾವರಣ ಮರಳುವ ಸಾಧ್ಯತೆ ಇದೆ. ಇಂದು (ನವೆಂಬರ್ 2) ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ನವೆಂಬರ್ 1ರಿಂದ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು-ಮಿಂಚು ಕೂಡ ಸಂಭವಿಸಬಹುದು.

ಕರಾವಳಿಯಲ್ಲಿ ಹಲವೆಡೆ ಮಳೆ, ಗುಡುಗು ಸಹಿತ ವರ್ಷಧಾರೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆಯೂ ನೀಡಲಾಗಿದೆ.

ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ

ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆ ಅಥವಾ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು ಸೇರಿ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 5ರವರೆಗೆ ಗಾಳಿ, ಗುಡುಗು-ಮಿಂಚಿನ ಎಚ್ಚರಿಕೆ

ರಾಜ್ಯದಲ್ಲಿ ನವೆಂಬರ್ 1ರಿಂದ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ರಾಜ್ಯದ ಅಲ್ಲಲ್ಲಿ ಗುಡುಗು-ಮಿಂಚು ಸಂಭವಿಸುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಮಳೆಯ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡು ಕರ್ನಾಟಕದ ಅಲ್ಲಲ್ಲಿ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡು ಕರ್ನಾಟಕದಲ್ಲಿ ಒಣಹವೆ ಮುಂದುವರಿದಿತ್ತು. ರಾಜ್ಯದ ಬಯಲು ಪ್ರದೇಶಗಳ ಪೈಕಿ ಮೈಸೂರು ಪಿಟಿಒದಲ್ಲಿ ಕನಿಷ್ಠ 17.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us