Karnataka Weather Forecast: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಮಳೆ,7 ದಿನ ವರುಣನ ಆರ್ಭಟ

ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬರ ಛಾಯೆ ಆವರಿಸಿದೆ. ಇದರ ನಡುವೆ ಈ ತಿಂಗಳಾಂತ್ಯದಲ್ಲಿ ಮುಂಗಾರು ಮಳೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು...ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವೆಡೆ ಗುಡುಗು, ಗಾಳಿಯೊಂದಿಗೆ ಮಳೆಯಾಗಲಿದೆ ಎಂದಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.

Karnataka Weather Forecast: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಮಳೆ,7 ದಿನ ವರುಣನ ಆರ್ಭಟ
Karnataka Weather Forecast

Updated on: Jul 25, 2026 | 5:48 PM

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ತಿಂಗಳಾಂತ್ಯ ಮಳೆ ಅಬ್ಬರ
  • ಮುಂದಿನ 7ದಿನ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ
  • ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಬೆಂಗಳೂರು, (ಜುಲೈ 25): ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ (Karnataka) ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇನ್ನು ಈ ಭಾಗಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 30-40 ಕಿ.ಮೀ ವೇಗ) ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.


ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಬಿರುಗಾಳಿ ಸಮೇತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us