AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಹಿಂಗಾರು ಅಬ್ಬರ ಶುರು, ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗಬಹುದು. ಸದ್ಯ ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮುಂಗಾರು ಆರಂಭವಾಗಿರುವುದೇ ಮಳೆಗೆ ಕಾರಣವಾಗಿದೆ.

Karnataka Weather Forecast: ಹಿಂಗಾರು ಅಬ್ಬರ ಶುರು, ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್
ಬೆಂಗಳೂರಿನ ವಿ. ವಿ. ಪುರಂನಲ್ಲಿ ಗುರುವಾರ ಸಂಜೆ ಸುರಿದ ಮಳೆImage Credit source: tv9
ಗಣಪತಿ ಶರ್ಮಾ
|

Updated on:Oct 16, 2026 | 7:00 AM

Share

ಮುಖ್ಯಾಂಶಗಳು

  • ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ
  • ಚಿಕ್ಕಮಗಳೂರು ಹಾಸನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ
  • ಬೆಂಗಳೂರಿನಲ್ಲೂ ಗುಡುಗು ಮಿಂಚು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರಂದು ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಬಹುತೇಕ ನಿಂತುಹೋಗಿದ್ದು, ಇದೇ ವೇಳೆ ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮುಂಗಾರು ಮಳೆ ಆರಂಭವಾಗಿದೆ. ಇದರ ಪರಿಣಾಮವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಅಕ್ಟೋಬರ್ 16ರಂದು ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 17ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಅಕ್ಟೋಬರ್ 16ರಂದು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ಇದೆ.

ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್ ಸಂದೇಶ

ಅಕ್ಟೋಬರ್ 17ರಂದು ಬೆಂಗಳೂರಿಗೂ ಮಳೆ ಮುನ್ಸೂಚನೆ

ಅಕ್ಟೋಬರ್ 17ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಇದನ್ನೂ ಓದಿ: ಅ. 19ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Fri, 16 October 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮೈಸೂರು ದಸರಾ: ಜಂಬೂಸವಾರಿಯಲ್ಲಿ 12 ಆನೆಗಳು ಫೈನಲ್​​! ಯಾರಿಗೆ ಯಾವ ಸ್ಥಾನ?
ಮೈಸೂರು ದಸರಾ: ಜಂಬೂಸವಾರಿಯಲ್ಲಿ 12 ಆನೆಗಳು ಫೈನಲ್​​! ಯಾರಿಗೆ ಯಾವ ಸ್ಥಾನ?
‘ರಾಮಾಯಣ’ ಸಿನಿಮಾ ಟ್ರೈಲರ್ ಇವೆಂಟ್: ಲೈವ್ ಇಲ್ಲಿ ನೋಡಿ
‘ರಾಮಾಯಣ’ ಸಿನಿಮಾ ಟ್ರೈಲರ್ ಇವೆಂಟ್: ಲೈವ್ ಇಲ್ಲಿ ನೋಡಿ
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ