Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ?

Monsoon 2026: ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಬೆಂಗಳೂರಿಗೂ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ?
ಮಳೆ (ಎಐ ಚಿತ್ರ)
Image Credit source: tv9 kannada

Updated on: May 17, 2026 | 6:43 PM

ಬೆಂಗಳೂರು, ಮೇ 17: ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಮುಖ್ಯಾಂಶಗಳು

  • ಬೆಂಗಳೂರು ಹಾಗೂ ದಕ್ಷಿಣ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ
  • ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದ ಹವಾಮಾನ ವರದಿ
  • ಕರ್ನಾಟಕದಲ್ಲಿ ಮುಂದಿನ 7 ದಿನಗಳ ಹವಾಮಾನ ವೈಪರೀತ್ಯ

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

KSNDMC ಟ್ವೀಟ್​

ದಕ್ಷಿಣ ಒಳನಾಡುನಲ್ಲಿ ಭಾರಿ ಮಳೆ ಎಚ್ಚರಿಕೆ

ಮೇ 18 ಹಾಗೂ ಮೇ 19ರಂದು ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜೊತೆಗೆ ಬಲವಾದ ಗಾಳಿ, ಗುಡುಗು ಮತ್ತು ಮಿಂಚಿನ ಆರ್ಭಟ ಇರಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 20ರಂದು ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ, ಗುಡುಗು-ಮಿಂಚು ಸಹಿತ ಗಾಳಿ ಮಳೆ ಮುಂದುವರಿಯಲಿದೆ. ಇನ್ನು ಮೇ 21 ರಿಂದ 23ರ ವರೆಗೆ ಯಾವುದೇ ವಿಶೇಷ ಮುನ್ಸೂಚನೆ ಅಥವಾ ಅಪಾಯದ ಎಚ್ಚರಿಕೆ ಇರುವುದಿಲ್ಲ.

ಉತ್ತರ ಒಳನಾಡುನಲ್ಲಿ ಗುಡುಗು ಸಹಿತ ಗಾಳಿ

ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದರೆ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಪಮಾನ ಎಂದಿನಂತೆ ಮುಂದುವರಿಯಲಿದ್ದು, ಸಂಜೆ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ. ಮೇ 19 ರಿಂದ ಮೇ 23ರ ವರೆಗೆ ವಾತಾವರಣ ಸಂಪೂರ್ಣ ಸಹಜ ಸ್ಥಿತಿಗೆ ಮರಳಲಿದ್ದು, ಯಾವುದೇ ಮಳೆಯ ಎಚ್ಚರಿಕೆ ಇಲ್ಲ.

ಕರಾವಳಿ ಕರ್ನಾಟಕ ನಿರಾಳ

ಮುಂದಿನ 7 ದಿನಗಳ ಕಾಲ (ಮೇ 17 ರಿಂದ ಮೇ 23 ರವರೆಗೆ) ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗದಲ್ಲಿ ಯಾವುದೇ ಮಳೆ ಅಥವಾ ಹವಾಮಾನ ವೈಪರೀತ್ಯದ ಎಚ್ಚರಿಕೆಯನ್ನು ನೀಡಿಲ್ಲ. ಇಲ್ಲಿ ವಾತಾವರಣ ಎಂದಿನಂತೆ ಸಾಮಾನ್ಯವಾಗಿರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us