AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 16ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​
ಮಳೆImage Credit source: China Xinhua News
Follow us
ನಯನಾ ರಾಜೀವ್
|

Updated on: May 08, 2024 | 7:39 AM

ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ನಂಜನಗೂಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಕೃಷ್ಣರಾಜಸಾಗರ, ಚಾಮರಾಜನಗರ, ಹೊನಕೆರೆ, ಮಿಡಿಗೇಶಿ, ಕೋಲಾರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಭಾಗಮಂಡಲ, ದೇವನಹಳ್ಳಿ, ಕೊಳ್ಳೇಗಾಲ, ಮಂಡ್ಯದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬನಶಂಕರಿ, ಲಾಲ್​ಬಾಗ್​, ಜೆಪಿನಗರ, ಜಯನಗರ ಕಡೆಗಳಲ್ಲಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 41.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 44.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 30.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ