Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 16ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​
ಮಳೆ
Image Credit source: China Xinhua News

Updated on: May 08, 2024 | 7:39 AM

ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ನಂಜನಗೂಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಕೃಷ್ಣರಾಜಸಾಗರ, ಚಾಮರಾಜನಗರ, ಹೊನಕೆರೆ, ಮಿಡಿಗೇಶಿ, ಕೋಲಾರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಭಾಗಮಂಡಲ, ದೇವನಹಳ್ಳಿ, ಕೊಳ್ಳೇಗಾಲ, ಮಂಡ್ಯದಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬನಶಂಕರಿ, ಲಾಲ್​ಬಾಗ್​, ಜೆಪಿನಗರ, ಜಯನಗರ ಕಡೆಗಳಲ್ಲಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 41.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 44.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 30.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us