ಕರ್ನಾಟಕ ಹವಾಮಾನ: ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 22: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಸೆ.23ರಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಕಳೆದ 2 ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ 2 ದಿನ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ: ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ
ಬೆಂಗಳೂರು ಮಳೆ
Image Credit source: tv9

Updated on: Sep 22, 2026 | 7:36 AM

ಮುಖ್ಯಾಂಶಗಳು

  • ಸೆ.23ರಂದು ಹಲವೆಡೆ ಭಾರಿ ಮಳೆ ಮುನ್ಸೂಚನೆ
  • ಕರಾವಳಿಯಲ್ಲಿ ಭಾರಿ ಮಳೆಯ ಸಾಧ್ಯತೆ
  • ಬೆಂಗಳೂರಿಗೂ ಮಳೆ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 22: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 22ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಸೆ.23ರಂದು ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಸೆಪ್ಟೆಂಬರ್ 23ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರಿ-ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಹಾಸನ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 23 ಹಾಗೂ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್ ಸಂದೇಶ


ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡಿನ ಹಲವು ಕಡೆ, ಕರಾವಳಿಯ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಸೋಮವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ 9 ಸೆಂ.ಮೀ, ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ 5 ಸೆಂ.ಮೀ, ವಿಜಯನಗರ ಜಿಲ್ಲೆಯ ಹೊಸಹಳ್ಳಿಯಲ್ಲಿ 4 ಸೆಂ.ಮೀ ಹಾಗೂ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ 4 ಸೆಂ.ಮೀ ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us