Karnataka Weather forecast: ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ, 1 ವಾರ ಗುಡುಗು ಸಹಿತ ಭಾರೀ ಮಳೆ
ಪೂರ್ವ ಮುಂಗಾರು ಮಾರುತಗಳ ತೀವ್ರತೆ ಅಧಿಕವಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮುಂದಿನ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ

ಬೆಂಗಳೂರು (ಮೇ 22): ಕರ್ನಾಟಕದಲ್ಲಿ (Karnataka) ಮುಂಗಾರು ಪೂರ್ವ ಮಾರುತಗಳು (Pre Monsoon Rain) ತೀವ್ರಗೊಂಡಿದ್ದು, ಮೇ 22 ರಿಂದ ಮುಂದಿನ ಒಂದು ವಾರ (ಮೇ 28ರೆವರೆಗೆ) ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ .
ಯಾವಾಗ ಎಲ್ಲೆಲ್ಲಿ ಮಳೆ?
places over Interior Karnataka from 24th May 2026 to 26th May 2026. Thunderstorm accompanied with lightning likely to occur at one or two places over Coastal Karnataka from 22nd May 2026 to 26th May 2026.#premonsoon #KSNDMC #KarnatakaRains
— Karnataka State Natural Disaster Monitoring Centre (@KarnatakaSNDMC) May 22, 2026
ಮೇ 23 ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಮೇ 24 ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ. ಮೇ 25 ಮತ್ತು 26 ರಂದು ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಇದನ್ನೂ ನೋಡಿ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಇನ್ನು ಮೇ 27 ಮತ್ತು 28 ರಂದು ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ. ಇನ್ನು ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳವರೆಗೆ ಯಾವುದೇ ಪ್ರಮುಖ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
@Indiametdept 7 ದಿನಗಳ ಜಿಲ್ಲಾವಾರು #ಮಳೆ #ಮುನ್ಸೂಚನೆ (ದಿನಾಂಕ 22.05.26). 7 days District-wise #Rainfall #Forecast from India Meteorological Department (Date: 22.05.26).#ksndmc pic.twitter.com/YQmfsk1fMo
— Karnataka State Natural Disaster Monitoring Centre (@KarnatakaSNDMC) May 22, 2026
ದಕ್ಷಿಣ ಒಳನಾಡು
#ಮಳೆ #ಮುನ್ನೆಚ್ಚರಿಕೆ :#rainfall #Warning for Interior #Karnataka : #thunderstorm #lightning #KSNDMC@KarnatakaVarthe #KarnatakaRains #Premonsoon@DcDharwad @deobelagavi @deodcbagalkote @dc_gadag @DcKoppal @DCVijayapura @DC_blrurban @DCChikkabalapur @depcomkolar @DcDeoHassan pic.twitter.com/ih3ftBRl4g
— Karnataka State Natural Disaster Monitoring Centre (@KarnatakaSNDMC) May 22, 2026
ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹೆಚ್ಚಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಿಡಿಲು ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ.
ಉತ್ತರ ಒಳನಾಡು
ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
#ಆಲಿಕಲ್ಲುಮಳೆ ಎಚ್ಚರಿಕೆ:#Hailstorm #Warning for North Interior #Karnataka :#orange #Alert#rainfall #thunderstorm #lightning #ksndmc@DcDharwad @deobelagavi @deodcbagalkote @dc_gadag @KarnatakaVarthe #KarnatakaRains #premonsoon pic.twitter.com/eNUPyUqEro
— Karnataka State Natural Disaster Monitoring Centre (@KarnatakaSNDMC) May 22, 2026
ಕರಾವಳಿ ಕರ್ನಾಟಕ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮತ್ತು ಕೊಡಗು ಜಿಲ್ಲೆಗಳ ಹಲವು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉರಿ ಸೆಖೆಯ ವಾತಾವರಣ ಮುಂದುವರಿಯಲಿದ್ದು, ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:52 pm, Fri, 22 May 26





