Karnataka Weather: ಉಷ್ಣ ಅಲೆಯ ನಡುವೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಕರ್ನಾಟಕದಲ್ಲಿ ಒಂದೆಡೆ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಿದ್ದು, ಇನ್ನೊಂದೆಡೆ ಮಳೆಯ ಮುನ್ಸೂಚನೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 11ಕ್ಕಿಂತ ಹೆಚ್ಚಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಮೇ 1 ರಿಂದ 4ರವರೆಗೆ ಹೆಚ್ಚು ಮಳೆಯಾಗಲಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕೆಐಎಎಲ್ನಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠಢ ಉಷ್ಣಾಂಶ, ಕಾರವಾರದಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಾಮರಾಜನಗರದಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ