Karnataka Weather: ಉಷ್ಣ ಅಲೆಯ ನಡುವೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

|

Updated on: Apr 28, 2024 | 7:48 AM

ಕರ್ನಾಟಕದಲ್ಲಿ ಒಂದೆಡೆ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಿದ್ದು, ಇನ್ನೊಂದೆಡೆ ಮಳೆಯ ಮುನ್ಸೂಚನೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಉಷ್ಣ ಅಲೆಯ ನಡುವೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ
Image Credit source: The Weather Channel
Follow us on

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 11ಕ್ಕಿಂತ ಹೆಚ್ಚಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 42.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಮೇ 1 ರಿಂದ 4ರವರೆಗೆ ಹೆಚ್ಚು ಮಳೆಯಾಗಲಿದೆ.

ಬೀದರ್​, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕೆಐಎಎಲ್​ನಲ್ಲಿ 37.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠಢ ಉಷ್ಣಾಂಶ, ಕಾರವಾರದಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಾಮರಾಜನಗರದಲ್ಲಿ 39.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ