AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವೆಡೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕ ಮುಂಗಾರು ಮಳೆ: ಕರ್ನಾಟಕದಲ್ಲಿ ಆರಂಭದಲ್ಲಿ ಮಂಕಾಗಿದ್ದ ಮುಂಗಾರು ಮಳೆ ಇದೀಗ ಜುಲೈ ಅಂತ್ಯದಿಂದ ಚುರುಕು ಪಡೆದುಕೊಂಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ವರದಿ ಇಲ್ಲಿದೆ.

Karnataka Weather Forecast: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವೆಡೆ ರೆಡ್, ಆರೆಂಜ್ ಅಲರ್ಟ್
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Aug 02, 2026 | 6:08 PM

Share

ಬೆಂಗಳೂರು, (ಆಗಸ್ಟ್ 02): ಮುಂದಿನ 7 ದಿನಗಳ ಕಾಲ ಕರ್ನಾಟಕದ (Karnataka) ಹಲವೆಡೆ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹಲವೆಡೆ ರೆಡ್-ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿಯ ಉಳಿದ ಜಿಲ್ಲೆಗಳು ಸೇರಿದಂತೆ ಒಟ್ಟು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ , ಬೆಂಗಳೂರು (ಗ್ರಾಮೀಣ) ಬೆಂಗಳೂರು (ನಗರ) ಚಾಮರಾಜನಗರ ,ಚಿಕ್ಕಬಳ್ಳಾಪುರ , ಚಿತ್ರದುರ್ಗ, ದಾವಣಗೆರೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ. ವೇಗದಲ್ಲಿ) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us