
ಬೆಂಗಳೂರು, (ಆಗಸ್ಟ್ 02): ಮುಂದಿನ 7 ದಿನಗಳ ಕಾಲ ಕರ್ನಾಟಕದ (Karnataka) ಹಲವೆಡೆ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿಯ ಉಳಿದ ಜಿಲ್ಲೆಗಳು ಸೇರಿದಂತೆ ಒಟ್ಟು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ : (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 2 ರಂದು ಅಲ್ಲಲ್ಲಿ ಅತಿ ಭಾರಿ ಮಳೆ & ಆಗಸ್ಟ್ 3 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. #KSNDMC pic.twitter.com/2rNi9BYKlG
— Karnataka State Natural Disaster Monitoring Centre (@KarnatakaSNDMC) August 2, 2026
ಬಳ್ಳಾರಿ , ಬೆಂಗಳೂರು (ಗ್ರಾಮೀಣ) ಬೆಂಗಳೂರು (ನಗರ) ಚಾಮರಾಜನಗರ ,ಚಿಕ್ಕಬಳ್ಳಾಪುರ , ಚಿತ್ರದುರ್ಗ, ದಾವಣಗೆರೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
likely to occur at one or two places over Belagavi district.
Light to moderate rain with sustained wind (40-50 Kmph) likely to occur at one or two places over Bagalkot, Bidar, Gadag, Kalburgi, Koppal, Raichur, Vijayapura, Yadgir, Dharwad and Haveri districts.— Karnataka State Natural Disaster Monitoring Centre (@KarnatakaSNDMC) August 2, 2026
ಉತ್ತರ ಕರ್ನಾಟಕ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ. ವೇಗದಲ್ಲಿ) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.