Karnataka Weather: ಬೆಂಗಳೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ

ಕಳೆದ ಡಿಸೆಂಬರ್​ನಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ನಾನಾ ಭಾಗಗಳಲ್ಲಿ ಮಳೆಯಾಗಿತ್ತು. ಈಗ ಮತ್ತೊಂದು ಚಂಡಮಾರುತವು ಅಪ್ಪಳಿಸಲಿದ್ದು, ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲಿ ಕೂಡ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವಾರಣವಿದೆ. ಇಂದು ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜನವರಿ 18 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಚಂಡಮಾರುತದಿಂದಾಗಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Jan 16, 2025 | 7:20 AM

ಬೆಂಗಳೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಬೆಂಗಳೂರಿನಲ್ಲಿ ತುಂತುರು ಮಳೆಯಾಗಿತ್ತು. ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಚಳಿ ಇದೆ. ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ.

ಕಾರ್ಕಳದಲ್ಲಿ ನಿನ್ನೆ ಮಳೆಯಾಗಿದೆ. ಬೀದರ್​ನಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಚಂಡಮಾರುತ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು, 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ