ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಎಂಟ್ರಿಗೆ ಮುನ್ಸೂಚನೆ: ಚಳಿಯೊಂದಿಗೆ 5 ದಿನ ಮಳೆ ಸಾಧ್ಯತೆ
Karnataka Weather Forecast: ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಮಂಜು ಮತ್ತು ಚಳಿಯೂ ಇರಲಿದೆ.
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದ (Karnataka) ಉದ್ದಗಲಕ್ಕೂ ಅಬ್ಬರಿಸಿದ್ದ ಮಳೆರಾಯ ಸದ್ಯ ತಣ್ಣಗಾಗಿದ್ದಾನೆ. ಆ ಮೂಲಕ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಮಳೆರಾಯನ ಎಂಟ್ರಿ ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಈ ವಾರದಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಮಳೆಯೊಂದು ಮಂಜು ಮತ್ತು ಚಳಿ ಕೂಡ ಇರಲಿದೆ ಎನ್ನಲಾಗುತ್ತಿದೆ.
ಈ ಜಿಲ್ಲೆಗಳಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆ ನಿರೀಕ್ಷೆ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. pic.twitter.com/wHtWM98pSR
— Karnataka State Natural Disaster Monitoring Centre (@KarnatakaSNDMC) October 30, 2024
ಅದೇ ರೀತಿಯಾಗಿ ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಇದನ್ನೂ ಓದಿ: ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ
ಇಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.