ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದ (Karnataka) ಉದ್ದಗಲಕ್ಕೂ ಅಬ್ಬರಿಸಿದ್ದ ಮಳೆರಾಯ ಸದ್ಯ ತಣ್ಣಗಾಗಿದ್ದಾನೆ. ಆ ಮೂಲಕ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಮಳೆರಾಯನ ಎಂಟ್ರಿ ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಈ ವಾರದಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಮಳೆಯೊಂದು ಮಂಜು ಮತ್ತು ಚಳಿ ಕೂಡ ಇರಲಿದೆ ಎನ್ನಲಾಗುತ್ತಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. pic.twitter.com/wHtWM98pSR— Karnataka State Natural Disaster Monitoring Centre (@KarnatakaSNDMC) October 30, 2024
ಅದೇ ರೀತಿಯಾಗಿ ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಇದನ್ನೂ ಓದಿ: ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ
ಇಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.