AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಮಧ್ಯೆಯೇ ಗುಡುಗು ಸಹಿತ ಮಳೆ: ಮುಂದಿನ 7 ದಿನ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಭಾರತೀಯ ಹವಾಮಾನ ಇಲಾಖೆ (IMD) ವರದಿಯ ಪ್ರಕಾರ, ಮುಂದಿನ ಒಂದು ವಾರ ಕರ್ನಾಟಕದಲ್ಲಿ ಮಿಶ್ರ ಹವಾಮಾನ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಮಲೆನಾಡಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಉಳಿದ ಪ್ರದೇಶಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಸಿಡಿಲು, ಮಿಂಚಿನಿಂದ ಸುರಕ್ಷಿತವಾಗಿರಲು ಇಲಾಖೆ ಸೂಚಿಸಿದೆ.

ಬಿಸಿಲಿನ ಮಧ್ಯೆಯೇ ಗುಡುಗು ಸಹಿತ ಮಳೆ: ಮುಂದಿನ 7 ದಿನ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 26, 2026 | 2:52 PM

Share

ಬೆಂಗಳೂರು, ಮಾ.26: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಒಣ ಹವೆ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ.

ಮಧ್ಯಾಹ್ನದ ನಂತರ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ವರದಿಯ ಪ್ರಕಾರ, ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ (Thunderstorms & Gusty Winds) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲು ಮತ್ತು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಮರದ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಇಲ್ಲಿದೆ  ಎಕ್ಸ್​​ ಪೋಸ್ಟ್​;

ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡು ಭಾಗಗಳಾದ ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

Karnataka Weather Forecast

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ, ಸೆಖೆ ಹೆಚ್ಚಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಬಿಸಿಲಿನ ತಾಪಮಾನ 40°C ದಾಟುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದ್ದು, ಒಣ ಹವೆ ಮುಂದುವರಿಯಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Thu, 26 March 26

Follow Us