Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ
Monsoon 2026: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ಆಗಸ್ಟ್ 13ರವರೆಗೆ ರಾಜ್ಯಾದ್ಯಂತ ವರ್ಷಧಾರೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ನೀಡಿರುವ ಮಾಹಿತಿ ಇಲ್ಲಿದೆ.

ಮುಖ್ಯಾಂಶಗಳು
- ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಮಳೆ ಅಬ್ಬರ
- ಆ.13ರ ವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
- ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ: ಯಲ್ಲೋ ಅಲರ್ಟ್
ಬೆಂಗಳೂರು, ಆಗಸ್ಟ್ 07: ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್ 13ರ ವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರಿನಲ್ಲಿ 4 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ. ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆ, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿರೋದಾಗಿ ಅವರು ಹೇಳಿದ್ದಾರೆ.
ಆಗಸ್ಟ್ 8ರಂದು ಉತ್ತರ ಒಳನಾಡಿನ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 13ರ ವರೆಗೆ ಉತ್ತಮ ಮಳೆಯಾಗಲಿದೆ. ರಾಜ್ಯದಲ್ಲಿ ಮಳೆಯ ವಿಂಗಡಣೆ ಹಾಗೂ ತೀವ್ರತೆ ಆಗಸ್ಟ್ 9ರಿಂದ 13ರ ವರೆಗೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಅಲರ್ಟ್ ಇಲ್ಲ. ಹೀಗಿದ್ದರೂ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಸಿಎಸ್ ಪಾಟೀಲ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಗ್ರಾಮಸ್ಥರು!
ನಾಳೆ ಎಲ್ಲೆಲ್ಲಿ ಮಳೆ?
24-Hour #Rainfall #Forecast for #Karnataka COASTAL KARNATAKA Heavy to very heavy rain with sustained wind (30-40 Kmph) likely to occur at one or two places over Dakshina Kannada district. Heavy rain with sustained wind (30-40 Kmph) likely to occur at one or two places over
— Karnataka State Natural Disaster Monitoring Centre (@KarnatakaSNDMC) August 7, 2026
ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ನಾಳೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯ ಜೊತೆಗೆ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರಮ ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:26 pm, Fri, 7 August 26




