Karnataka Weather Forecast: ಕರ್ನಾಟಕ ಹವಾಮಾನ; ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಜುಲೈ 28: ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 28 ಮತ್ತು 29ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

Karnataka Weather Forecast: ಕರ್ನಾಟಕ ಹವಾಮಾನ; ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರೀ ಮಳೆ ಮುನ್ಸೂಚನೆ
ದಕ್ಷಿಣ ಕನ್ನಡ ಜಿಲ್ಲೆ ಸಮೀಪದ ಕುಂಬಳೆಯಲ್ಲಿ ಭಾರಿ ಮಳೆ
Image Credit source: tv9

Updated on: Jul 29, 2026 | 8:11 AM

ಮುಖ್ಯಾಂಶಗಳು

  • ಉಡುಪಿ, ಉತ್ತರ ಕನ್ನಡಕ್ಕೆ ಭಾರೀ ಮಳೆ ಮುನ್ಸೂಚನೆ
  • ಶಿವಮೊಗ್ಗ, ಚಿಕ್ಕಮಗಳೂರಿಗೂ ಎಚ್ಚರಿಕೆ
  • ಹಲವೆಡೆ 50 ಕಿ.ಮೀ. ವೇಗದ ಗಾಳಿ

ಬೆಂಗಳೂರು, ಜುಲೈ 28: ಕರ್ನಾಟಕದಲ್ಲಿ ಮುಂಗಾರು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ (Weather Forecast) ಪ್ರಕಾರ, ಜುಲೈ 28 ಹಾಗೂ 29ರಂದು ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್

ಕರಾವಳಿ ಕರ್ನಾಟಕದಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಒಂದು ಅಥವಾ ಎರಡು ಕಡೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಜುಲೈ 29ಕ್ಕೂ ಕರಾವಳಿ, ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಜುಲೈ 29ರಂದೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಇನ್ನು ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ, ಎಷ್ಟು?

ಸೋಮವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.

  • ಕೊಲ್ಲೂರು (ಉಡುಪಿ) – 7 ಸೆಂ.ಮೀ.
  • ಆಗುಂಬೆ (ಶಿವಮೊಗ್ಗ) – 5 ಸೆಂ.ಮೀ.
  • ಮೂಡುಬಿದಿರೆ (ದಕ್ಷಿಣ ಕನ್ನಡ) – 4 ಸೆಂ.ಮೀ.
  • ಸುಳ್ಯ (ದಕ್ಷಿಣ ಕನ್ನಡ) – 4 ಸೆಂ.ಮೀ.
  • ಉಪ್ಪಿನಂಗಡಿ (ದಕ್ಷಿಣ ಕನ್ನಡ) – 4 ಸೆಂ.ಮೀ.
  • ಭಾಗಮಂಡಲ (ಕೊಡಗು) – 3 ಸೆಂ.ಮೀ.
  • ಧರ್ಮಸ್ಥಳ (ದಕ್ಷಿಣ ಕನ್ನಡ) – 3 ಸೆಂ.ಮೀ.

ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ನದಿ-ಹಳ್ಳಗಳ ಸಮೀಪ ಅನಗತ್ಯವಾಗಿ ಹೋಗದಿರುವುದು ಹಾಗೂ ಬಿರುಗಾಳಿ ಇರುವ ಸಂದರ್ಭಗಳಲ್ಲಿ ಮರಗಳು ಮತ್ತು ದುರ್ಬಲ ಕಟ್ಟಡಗಳ ಬಳಿ ನಿಲ್ಲದಿರುವುದು ಸುರಕ್ಷಿತ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Tue, 28 July 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us