AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಶಿವಮೊಗ್ಗ-ಚಿಕ್ಕಮಗಳೂರಲ್ಲೂ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 29: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ಇದೆ.

Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಶಿವಮೊಗ್ಗ-ಚಿಕ್ಕಮಗಳೂರಲ್ಲೂ ಭಾರೀ ಮಳೆ ಮುನ್ಸೂಚನೆ
ಮಂಗಳೂರಿನಲ್ಲಿ ಬುಧವಾರ ಮುಂಜಾನೆಯೇ ಭಾರಿ ಮಳೆಯಾಗಿದ್ದು, ಯೆಯ್ಯಾಡಿ ಬಳಿ ದಟ್ಟ ಮೋಡ ಕವಿದ ವಾತಾವರಣImage Credit source: tv9
ಗಣಪತಿ ಶರ್ಮಾ
|

Updated on:Jul 29, 2026 | 8:46 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
  • ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಭಾರೀ ಮಳೆ
  • ಹಲವೆಡೆ ಗಂಟೆಗೆ 50 ಕಿ.ಮೀ. ಗಾಳಿ

ಬೆಂಗಳೂರು, ಜುಲೈ 29: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ (Weather Forecast) ಪ್ರಕಾರ, ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 29 ಮತ್ತು 30ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯೂ ಇದೆ.

ಉತ್ತರ ಒಳನಾಡಿನಲ್ಲೂ ಭಾರಿ ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 30ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜುಲೈ 29 ಮತ್ತು 30ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ಬಳ್ಳಾರಿ ಹಾಗೂ ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?

ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಭಾಗದ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

  • ಗೇರುಸೊಪ್ಪ (ಉತ್ತರ ಕನ್ನಡ) – 10 ಸೆಂ.ಮೀ.
  • ಕುಮಟಾ (ಉತ್ತರ ಕನ್ನಡ) – 7 ಸೆಂ.ಮೀ.
  • ಮಂಕಿ (ಉತ್ತರ ಕನ್ನಡ) – 7 ಸೆಂ.ಮೀ.
  • ಹೊನ್ನಾವರ ವೀಕ್ಷಣಾಲಯ (ಉತ್ತರ ಕನ್ನಡ) – 7 ಸೆಂ.ಮೀ.
  • ಅಗುಂಬೆ (ಶಿವಮೊಗ್ಗ) – 7 ಸೆಂ.ಮೀ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಭಾರೀ ಮಳೆ, ಬಲವಾದ ಗಾಳಿ ಹಾಗೂ ಮಳೆ ಸಂಬಂಧಿತ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 am, Wed, 29 July 26

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"