Karnataka Weather: ಕೊಡಗು, ಮೈಸೂರು ಸೇರಿ ಹಲವೆಡೆ ಇಂದು ಮಳೆ, ಉಳಿದೆಡೆ ಉಷ್ಣ ಅಲೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ, ಕೊಡಗು, ಮೈಸೂರಿನಲ್ಲಿ ಇಂದು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕೊಡಗು, ಮೈಸೂರು ಸೇರಿ ಹಲವೆಡೆ ಇಂದು ಮಳೆ, ಉಳಿದೆಡೆ ಉಷ್ಣ ಅಲೆ
ಮಳೆ

Updated on: May 03, 2024 | 7:42 AM

ಕೊಡಗು, ಮೈಸೂರು ಸೇರಿದಂತೆ ಹಲವೆಡೆ ಇಂದು ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಗುರುವಾರ ಬೆಂಗಳೂರಿನ ಬಹುತೇಕ ಕಡೆ ಮಳೆಯಾಗಿದೆ. ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ.

ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್​, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ,ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗುರುವಾರ ಕುಂದಾಪುರ, ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದೆ. ರಾಯಚೂರಿನಲ್ಲಿ 43.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 6ರಿಂದ ಮಳೆ, ಅಲ್ಲಿಯವರೆಗೆ ಒಣಹವೆ

ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ41.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us