Karnataka Weather Forecast: ಕರ್ನಾಟಕದಲ್ಲಿ 5 ದಿನ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 22ರವರೆಗೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಜೂನ್ 17: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೆಲವು ಭಾಗಗಳಲ್ಲಿಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಮುಖ್ಯಾಂಶಗಳು
- ಕರ್ನಾಟಕದಾದ್ಯಂತ ಮುಂದಿನ 5 ದಿನಗಳ ಮಳೆ ಮುನ್ಸೂಚನೆ
- ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
- ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ
ಜೂನ್ 17 ರಿಂದ ಜೂನ್ 20 ರವರೆಗೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಜೊತೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಟ್ವೀಟ್
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ Next 5 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnataKaRains pic.twitter.com/NKrLbVW0oG
— Karnataka State Natural Disaster Monitoring Centre (@KarnatakaSNDMC) June 17, 2026
ಜೂನ್ 20 ರಿಂದ ಜೂನ್ 21
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಸಿರು ವಲಯ ಮುಂದುವರಿದಿದ್ದು, ಯಾವುದೇ ಎಚ್ಚರಿಕೆ ಇಲ್ಲ.
ಜೂನ್ 21 ರಿಂದ ಜೂನ್ 22 ರವರೆಗೆ
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಮುಂದುವರಿಯಲಿದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಹಗುರದಿಂದ ಕುಡಿದ ಮಳೆ ಮುಂದುವರೆಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:24 pm, Wed, 17 June 26




