ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಭಾರೀ ಮಳೆ ಎಚ್ಚರಿಕೆ

ಕರ್ನಾಟಕ ಹವಾಮಾನ ಮುನ್ಸೂಚನೆ ನವೆಂಬರ್ 5: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಭಾರೀ ಮಳೆ ಎಚ್ಚರಿಕೆ
ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆ

Updated on: Nov 05, 2026 | 7:00 AM

ಮುಖ್ಯಾಂಶಗಳು

  • ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಭಾರೀ ಮಳೆ ಸಾಧ್ಯತೆ
  • ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
  • ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ ಮುಂದುವರಿಕೆ

ಬೆಂಗಳೂರು, ನವೆಂಬರ್ 5: ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Loading...

ಇನ್ನು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ನವೆಂಬರ್ 6ರವರೆಗೆ ಗಾಳಿ, ಗುಡುಗು ಎಚ್ಚರಿಕೆ

ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?

ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 7 ಸೆಂ.ಮೀ, ಮೈಸೂರು ಜಿಲ್ಲೆಯ ಸರಗೂರು ಮತ್ತು ಮಿರ್ಲೆಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ. ಎಚ್.ಡಿ.ಕೋಟೆಯಲ್ಲಿ 6 ಸೆಂ.ಮೀ ಮಳೆಯಾಗಿದೆ. ಇದಲ್ಲದೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ 4 ಸೆಂ.ಮೀ ಹಾಗೂ ಮೈಸೂರು ಪಿಟಿಒ ಪ್ರದೇಶದಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರ ಮತ್ತು ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಬಯಲು ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us