ಕರ್ನಾಟಕ ಹವಾಮಾನ ಮುನ್ಸೂಚನೆ: ಬೆಂಗಳೂರು, ಕರಾವಳಿಯೂ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದ್ದು, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 14ರಂದು ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಬೆಂಗಳೂರು, ಕರಾವಳಿಯೂ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ
ಸಾಂದರ್ಭಿಕ ಚಿತ್ರ
Image Credit source: tv9

Updated on: Oct 13, 2026 | 6:53 AM

ಮುಖ್ಯಾಂಶಗಳು

  • ಮುಂಗಾರು ದುರ್ಬಲ, ರಾಜ್ಯದ ಬಹುತೇಕ ಕಡೆ ಒಣಹವೆ
  • ಕರಾವಳಿ ಉತ್ತರ ಒಳನಾಡಿನಲ್ಲಿ ಇಂದು-ನಾಳೆ ಒಣ ಹವಾಮಾನ
  • ಅಕ್ಟೋಬರ್ 14ರಂದು ಮೂರು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್ 13: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ನೀಡಿರುವ ಮುನ್ಸೂಚನೆಯ ಪ್ರಕಾರ ಇಂದು (ಅಕ್ಟೋಬರ್ 13) ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಆದಾಗ್ಯೂ, ಇಂದು ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಮುಂದಿನ ಎರಡು ದಿನಗಳ ಹವಾಮಾನದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯಿದೆ.

ಅ.14ರಂದು 3 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಅಕ್ಟೋಬರ್ 14ರಂದು ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಅಕ್ಟೋಬರ್ 14ರಂದು ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ದುರ್ಬಲಗೊಂಡ ನೈಋತ್ಯ ಮುಂಗಾರು

ರಾಜ್ಯದಲ್ಲಿ ಸೋಮವಾರ ಸಂಜೆಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಇತ್ತು. ವಿಜಯನಗರ ಜಿಲ್ಲೆಯ ಹೊಸಹಳ್ಳಿಯಲ್ಲಿ 2 ಸೆಂ.ಮೀ. ಮಳೆ ದಾಖಲಾಗಿದ್ದು ಬಿಟ್ಟರೆ ಬೇರೆಲ್ಲೂ ಮಳೆಯಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us