
ಬೆಂಗಳೂರು, ಅಕ್ಟೋಬರ್ 14: ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಇಂದು (ಅಕ್ಟೋಬರ್ 14) ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಅಕ್ಟೋಬರ್ 15ರಂದು ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಮಾತ್ರ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಅಕ್ಟೋಬರ್ 15ರಂದು ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಮುನ್ಸೂಚನೆ ಇದೆ. ತುಮಕೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಹುದು.
ಅಕ್ಟೋಬರ್ 15ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಎಲ್ಲೂ ಮಳೆಯಾದ ಬಗ್ಗೆ ವರದಿಯಾಗಿಲ್ಲ. ಸದ್ಯ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿದಿದ್ದರೂ, ಅಕ್ಟೋಬರ್ 15ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ