ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 15 ಮತ್ತು 16ರಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಳೆ ನಿರೀಕ್ಷಿಸಲಾಗಿದೆ.

ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 15, 2026 | 6:39 AM

ಮುಖ್ಯಾಂಶಗಳು

  • ಬೆಂಗಳೂರಿನಲ್ಲೂ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ
  • ಅಕ್ಟೋಬರ್ 16ರಂದು ಆರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ
  • ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ

ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 15ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅ.15ರಂದು ಯಾವ ಜಿಲ್ಲೆಗಳಲ್ಲಿ ಮಳೆ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಮಂಡ್ಯ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಅ.16ರಂದು ಆರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಅಕ್ಟೋಬರ್ 16ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ


ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗಬಹುದು.

ಕರ್ನಾಟಕದಲ್ಲಿ ಮುಂಗಾರು ದುರ್ಬಲ

ಹವಾಮಾನ ವರದಿ ಪ್ರಕಾರ, ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಮುಖ್ಯವಾಗಿ ಒಣ ಹವಾಮಾನ ಕಂಡುಬಂದಿದೆ. ಎಲ್ಲೂ ಮಳೆ ದಾಖಲಾಗಿಲ್ಲ. ಆದರೆ, ಮುಂದಿನ ಎರಡು ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us