
ಬೆಂಗಳೂರು, ಅಕ್ಟೋಬರ್ 28: ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅಕ್ಟೋಬರ್ 29ರಂದು ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳು ಹಾಗೂ ಬಳ್ಳಾರಿ, ವಿಜಯನಗರದಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 28ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ, ಉತ್ತರ ಒಳನಾಡಿನ ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಚಿಕ್ಕಬಳ್ಳಾಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಅಕ್ಟೋಬರ್ 29ರಂದು ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.
ಇದೇ ವೇಳೆ, ಉತ್ತರ ಒಳನಾಡಿನ ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.
ಇದನ್ನೂ ಓದಿ: ಅರ್ನಬ್ ಚಂಡಮಾರುತದಿಂದ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ; ವಿಮಾನ, ರೈಲು ಸೇವೆ ರದ್ದು
ದಕ್ಷಿಣ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಮಂಗಳವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಯಲುಸೀಮೆ ಪ್ರದೇಶದಲ್ಲಿ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದೇ ಅವಧಿಯಲ್ಲಿ ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ