ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ, ಮಲೆನಾಡಿನಲ್ಲಿ ಮಳೆ, 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕ ಮುಂಗಾರು ಮಳೆ ಮುನ್ಸೂಚನೆ ಅಕ್ಟೋಬರ್ 6: ಅಕ್ಟೋಬರ್ 6ರಂದು ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 7ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ, ಮಲೆನಾಡಿನಲ್ಲಿ ಮಳೆ, 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಸೋಮವಾರ ಸಂಜೆಯಿಂದ ಸುರಿದ ಭಾರಿ ಮಳೆಗೆ ಕೆಆರ್​ಪುರಂ ಅಂಡರ್​ಪಾಸ್​ನಲ್ಲಿ ನೀರು ನಿಂತಿರುವುದು
Image Credit source: tv9

Updated on: Oct 06, 2026 | 7:13 AM

ಬೆಂಗಳೂರು, ಅಕ್ಟೋಬರ್ 6: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 6ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಅಕ್ಟೋಬರ್ 7ರಂದು ಎಲ್ಲೆಲ್ಲಿ ಮಳೆ?

ಅಕ್ಟೋಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಮುಖ್ಯವಾಗಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಕರ್ನಾಟಕದಲ್ಲಿ ಮುಂಗಾರು ಸ್ಥಿತಿಗತಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಹಲವು ಕಡೆ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ.

ಸೋಮವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರ ವೀಕ್ಷಣಾಲಯದಲ್ಲಿ 11 ಸೆಂ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 8 ಸೆಂ.ಮೀ., ಮಂಗಳೂರು ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಸೆಂ.ಮೀ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಎಚ್‌ಎಂಎಸ್‌ನಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Tue, 6 October 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us