ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅಕ್ಟೋಬರ್ 7 ಮತ್ತು 8ರಂದು ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳ ಜೊತೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಕೆಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಒಣಹವೆ ಇರಲಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರಿನ ಮೆಜೆಸ್ಟಿಕ್​​ನಲ್ಲಿ ಸೋಮವಾರ ಸಂಜೆ ಸುರಿದ ಮಳೆ
Image Credit source: tv9

Updated on: Oct 07, 2026 | 6:41 AM

ಮುಖ್ಯಾಂಶಗಳು

  • ಕರಾವಳಿಯ ಕೆಲವೆಡೆ ಮಳೆ ಮುಂದುವರಿಯುವ ಸಾಧ್ಯತೆ
  • ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ
  • ತುಮಕೂರು, ಬೆಂಗಳೂರಿನಲ್ಲಿ 7 ಸೆಂ.ಮೀ ಮಳೆ ದಾಖಲು

ಬೆಂಗಳೂರು, ಅಕ್ಟೋಬರ್ 7: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 7 ಮತ್ತು 8ರಂದು ಕರಾವಳಿ ಕರ್ನಾಟಕದ ಕೆಲವು ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 7ರ ಹವಾಮಾನ ಹೇಗಿರಲಿದೆ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರಕ್ಕೆ ಮಳೆ ಮುನ್ಸೂಚನೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಕಡೆ ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗಬಹುದು. ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಅಕ್ಟೋಬರ್ 8ರಂದು ಎಲ್ಲೆಲ್ಲಿ ಮಳೆ?

ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಕ್ರಿಯ

ಮಂಗಳವಾರ ಸಂಜೆಗೆ ಕೊನೆಗೊಂಡಂತೆ ನೈಋತ್ಯ ಮುಂಗಾರು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಉತ್ತರ ಒಳನಾಡಿನ ಒಂದೆರಡು ಕಡೆ ಮಳೆ ದಾಖಲಾಗಿದೆ. ತುಮಕೂರು ಜಿಲ್ಲೆಯ ಬರ್ಗೂರ್ ಹಾಗೂ ಬೆಂಗಳೂರಿನ ಜಿಕೆವಿಕೆ ವ್ಯಾಪ್ತಿಯಲ್ಲಿ ತಲಾ 7 ಸೆಂ.ಮೀ ಮಳೆ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us