ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಅಕ್ಟೋಬರ್ 8 ರಂದು ಕರಾವಳಿಯ ಕೆಲವೆಡೆ ಸಾಧಾರಣ ಮಳೆ, ಉತ್ತರ ಒಳನಾಡಿನಲ್ಲಿ ಒಣ ಹವೆ ಮುನ್ಸೂಚನೆ ಇದೆ. ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 08, 2026 | 6:42 AM

ಬೆಂಗಳೂರು, ಅಕ್ಟೋಬರ್ 8: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಇಂದು (ಅಕ್ಟೋಬರ್ 8) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಅ.9ರಂದು 6 ಜಿಲ್ಲೆಗಳಲ್ಲಿ ಭಾರಿ ಮಳೆ

ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಕರಾವಳಿಯಲ್ಲೂ ಮಳೆ ಸಾಧ್ಯತೆ

ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಅಕ್ಟೋಬರ್ 9ರಂದು ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಎಲ್ಲೂ ಭಾರಿ ಮಳೆ ದಾಖಲಾಗಿಲ್ಲ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ 4 ಸೆಂ.ಮೀ ಹಾಗೂ ಚಾಮರಾಜನಗರ ಜಿಲ್ಲೆಯ ಬೇಗೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us