AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ನಾಳೆ 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್; ಕರಾವಳಿಯಲ್ಲಿ ಮಳೆಯಬ್ಬರ

Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹವಾಮಾನ ಇಲಾಖೆಯು ಜುಲೈ 8 ರಂದು ಕರಾವಳಿ ಮತ್ತು ಮಲೆನಾಡಿನ 7 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ ಬೆಳಗಾವಿ, ಧಾರವಾಡಕ್ಕೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿಲೋ ಮೀಟರ್​​ ತಲುಪಬಹುದು ಎಂದೂ ತಿಳಿಸಿದೆ.

Karnataka Weather Forecast: ನಾಳೆ 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್; ಕರಾವಳಿಯಲ್ಲಿ ಮಳೆಯಬ್ಬರ
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 07, 2026 | 6:43 PM

Share

ಮುಖ್ಯಾಂಶಗಳು

  • ಕರಾವಳಿ ಸೇರಿ ರಾಜ್ಯಾದ್ಯಂತ ಇನ್ನೂ ಕೆಲವು ದಿನ ಮಳೆ ಆರ್ಭಟ
  • 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ನೀಡಿರುವ ಹವಾಮಾನ ಇಲಾಖೆ
  • ಬೆಳಗಾವಿ ಮತ್ತು ಧಾರವಾಡದಲ್ಲೂ ಉತ್ತಮ ಮಳೆಯ ನಿರೀಕ್ಷೆ

ಬೆಂಗಳೂರು, ಜುಲೈ 07: ಕರ್ನಾಟಕದ ಹಲವೆಡೆ ಇನ್ನೂ ಕೆಲವು ದಿನಗಳ ಕಾಲ ಮುಂಗಾರು ಮಳೆಯ ಆರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9ರಂದು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ 8 ಮತ್ತು 9ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿಲೋ ಮೀಟರ್​​ ತಲುಪಬಹುದು ಎಂದೂ ತಿಳಿಸಿದೆ.

ಜುಲೈ 8ರಂದು 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೊಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಹೆಚ್ಚಿನ ಪ್ರಮಾಣದ ವರ್ಷಧಾರೆಯನ್ನು ನಿರೀಕ್ಷಿಸಲಾಗಿದೆ. ಬೆಳಗಾವಿ ಮತ್ತು ಧಾರವಾಡದಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದ್ದು, ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್​​ ನೀಡಲಾಗಿದೆ.

ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ ಹೊನ್ನೆತಾಳು, ಬಿರುನಾನಿಯಲ್ಲಿ ದಾಖಲೆ ಬರೆದ ಮಳೆ

ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ಉಳಿದಂತೆ ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:57 pm, Tue, 7 July 26

Follow Us
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ