Karnataka Weather Forecast: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್​​ ಅಲರ್ಟ್​; ಜುಲೈ 5ರ ವರೆಗೂ ಭಾರಿ ವರ್ಷಧಾರೆ

Monsoon 2026: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಜುಲೈ 5ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಗಾಳಿ ಸಹಿತ ಮುಂಗಾರು ಮಳೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗದ ಹಲವೆಡೆ ಜುಲೈ 7ರ ವರೆಗೆ ವರ್ಷಧಾರೆ ನಿರೀಕ್ಷಿಸಲಾಗಿದೆ.

Karnataka Weather Forecast: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್​​ ಅಲರ್ಟ್​; ಜುಲೈ 5ರ ವರೆಗೂ ಭಾರಿ ವರ್ಷಧಾರೆ
ಮಳೆ
Image Credit source: Tv9 Kannada

Updated on: Jul 03, 2026 | 4:59 PM

ಮುಖ್ಯಾಂಶಗಳು

  • ಕರಾವಳಿ, ಮಲೆನಾಡು ಭಾಗದಲ್ಲಿ ಮುಂದುವರಿಯಲಿದೆ ಮಳೆ ಆರ್ಭಟ
  • ಜುಲೈ 5ರ ವರೆಗೆ ಆರೆಂಜ್​​ ಅಲರ್ಟ್​​ ಘೊಷಿಸಿದ ಹವಾಮಾನ ಇಲಾಖೆ
  • ಬೆಂಗಳೂರಲ್ಲಿಯೂ ತುಂತುರು ಮಳೆ ಅಥವಾ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು, ಜುಲೈ 03: ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗದಲ್ಲಿ ಇನ್ನೂ ಕೆಲ ದಿನಗಳ ಕಾಲ ವರುಣಾರ್ಭಟ ಮುಂದುವರಿಯಲಿದ್ದು ಭಾರಿ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಜುಲೈ 5ರ ವರೆಗೆ ಆರೆಂಜ್​​ ಅಲರ್ಟ್​​ ಘೊಷಿಸಲಾಗಿದ್ದರೆ, ಉತ್ತರ ಒಳನಾಡು ಭಾಗದ ಹಲವೆಡೆ ಜುಲೈ 7ರ ವರೆಗೆ ವರ್ಷಧಾರೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜೊತೆಗೆ ತೀವ್ರ ಗಾಳಿಯ ಸಾಧ್ಯತೆಯ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ.

ನಾಳೆ ಎಲ್ಲೆಲ್ಲಿ ಮಳೆ?

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಸನ ಸೇರಿ ಬಳ್ಳಾರಿಯ ಕೆಲವೆಡೆ ಸಾಧಾರಾಣ ಮಳೆ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರಗಳಲ್ಲಿಯೂ ವರುಣನ ಆಗಮನದ ಬಗ್ಗೆ ಇಲಾಖೆ ಅಂದಾಜಿಸಿದೆ. ಉತ್ತರ ಒಳನಾಡಿನ ಹಲವೆಡೆಯೂ ಗಾಳಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ರೈತರಿಗೆ ಬ್ಯಾಡ್ ನ್ಯೂಸ್; ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ

ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ?

ನಾಳೆ ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಿನವಿಡೀ ಬಲವಾದ ಗಾಳಿ ಬೀಸಲಿದ್ದು, ಕೆಲವೆಡೆ ಗಾಳಿಯ ವೇಗವು ಗಂಟೆಗೆ 56 ಕಿ.ಮೀ.ಗಿಂತಲೂ ಹೆಚ್ಚಾಗುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:58 pm, Fri, 3 July 26

Follow Us