
ಬೆಂಗಳೂರು, ಏ.22: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸಂಜೆ ಹೊತ್ತಿಗೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಮಧ್ಯಾಹ್ನ ಬಿಸಿಲು ಹೆಚ್ಚಿರಲಿದ್ದು, ಉತ್ತರ ಒಳನಾಡಿನ ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ತಾಪಮಾನ 40°C ದಾಟುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36°C – 37°C ಆಸುಪಾಸಿನಲ್ಲಿರಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿರಲಿದೆ.
ಮಳೆ ಬರುವ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.ಗುಡುಗು ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಮರದ ಕೆಳಗೆ ಅಥವಾ ಬಯಲು ಪ್ರದೇಶದಲ್ಲಿ ನಿಲ್ಲದಂತೆ ರೈತರಿಗೆ ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಗುಡುಗು ಸಹಿತ ಮಳೆ ಬರುವಾಗ ಎಲೆಕ್ಟ್ರಾನಿಕ್ ಉಪಕರಣಗಳಿಂದ ದೂರವಿರಿ ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಿರಿ ಎಂದು ಇಲಾಖೆ ಹೇಳಿದೆ. ಬಿಸಿಲ ಧಗೆ ಹೆಚ್ಚಿರುವುದರಿಂದ ಹನಿ ನೀರಾವರಿ ಪದ್ಧತಿ ಅನುಸರಿಸಲು ಮತ್ತು ಜಾನುವಾರುಗಳಿಗೆ ಸಾಕಷ್ಟು ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸಲಹೆ ನೀಡಲಾಗಿದೆ.
| ವಿಭಾಗ | ಜಿಲ್ಲೆಗಳು | ಮುನ್ಸೂಚನೆ (ದಿನಾಂಕ) |
| ಕರಾವಳಿ | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ | ಏಪ್ರಿಲ್ 22 ರಿಂದ 25 ರವರೆಗೆ ಗುಡುಗು ಸಹಿತ ಹಗುರ ಮಳೆ. |
| ಉತ್ತರ ಒಳನಾಡು | ಬೆಳಗಾವಿ, ಧಾರವಾಡ, ಹಾವೇರಿ | ಏಪ್ರಿಲ್ 22 ರಿಂದ 25 ರವರೆಗೆ ಗುಡುಗು, ಮಿಂಚು ಸಹಿತ ಮಳೆ. |
| ಗದಗ, ವಿಜಯಪುರ | ಏಪ್ರಿಲ್ 22 ರಂದು ಮಳೆಯ ಸಾಧ್ಯತೆ. | |
| ಬೀದರ್, ಕಲಬುರಗಿ | ಏಪ್ರಿಲ್ 23 ಮತ್ತು 24 ರಂದು ಮಳೆ ನಿರೀಕ್ಷೆ. | |
| ದಕ್ಷಿಣ ಒಳನಾಡು | ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ | ಏಪ್ರಿಲ್ 22 ರಿಂದ 25 ರವರೆಗೆ ಸಂಜೆ ವೇಳೆ ಗುಡುಗು ಸಹಿತ ಮಳೆ. |
| ಚಾಮರಾಜನಗರ, ಮೈಸೂರು, ಮಂಡ್ಯ | ಏಪ್ರಿಲ್ 22 ರಿಂದ 24 ರವರೆಗೆ ಅಲ್ಲಲ್ಲಿ ಹಗುರ ಮಳೆ. | |
| ಬೆಂಗಳೂರು ನಗರ ಮತ್ತು ಗ್ರಾಮಾಂತರ | ಏಪ್ರಿಲ್ 23 ರಂದು ಮೋಡಕವಿದ ವಾತಾವರಣ, ಹಗುರ ಮಳೆ ಸಾಧ್ಯತೆ. |
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಹಗುರದಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 23 ಮತ್ತು 24 ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಏಪ್ರಿಲ್ 23 ರಂದು ಹಗುರ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ