AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಬೆಂಗಳೂರಿಗೂ ಗುಡುಗು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್ 25 ಮತ್ತು 26ರಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಬೆಂಗಳೂರಿಗೂ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಮಳೆ
ಗಣಪತಿ ಶರ್ಮಾ
|

Updated on: Nov 25, 2026 | 6:37 AM

Share

ಮುಖ್ಯಾಂಶಗಳು

  • ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
  • ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
  • ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಕೆ

ಬೆಂಗಳೂರು, ನವೆಂಬರ್ 25: ರಾಜ್ಯದ ಹವಾಮಾನದಲ್ಲಿ ಬದಲಾವಣೆ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 26ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿದಿದೆ. ಇದೇ ವೇಳೆ, ರಾಜ್ಯದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆಯಿಲ್ಲ. ಆದರೆ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಪ್ರವೃತ್ತಿ ಕಂಡುಬರಲಿದೆ ಎಂದು ಮುನ್ಸೂಚನೆ ತಿಳಿಸಿದೆ.

ನವೆಂಬರ್ 25ರಂದು ಎಲ್ಲೆಲ್ಲಿ ಮಳೆ?

ನವೆಂಬರ್ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.

ನವೆಂಬರ್ 26ರಂದು ಮಳೆ ಮುನ್ಸೂಚನೆ

ನವೆಂಬರ್ 26ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಢೀರ್ ಮಳೆರಾಯನ ಎಂಟ್ರಿ: ಸಂಜೆ ವೇಳೆ ರಸ್ತೆಗಿಳಿದ ವಾಹನ ಸವಾರರು ತತ್ತರ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More