
ಬೆಂಗಳೂರು, ಆಗಸ್ಟ್ 28: ಕೆಲವು ದಿನಗಳ ಹಿಂದೆ ವರ್ಷಧಾರೆ ಸುರಿಸಿದ್ದ ನೈರುತ್ಯ ಮುಂಗಾರು ಕರ್ನಾಟಕದಲ್ಲಿ ಮತ್ತೆ ದುರ್ಬಲವಾಗಿದೆ. ಮುಂದಿನ ಎರಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯನ್ನು (Weather Forecast) ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ನಿರಂತರ ಗಾಳಿಯೊಂದಿಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 29ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ ಹಾಗೂ ಹಾವೇರಿಯಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆಯಾಗಬಹುದು.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 4 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆ ಹಾಗೂ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ