AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂಗಾರು ದುರ್ಬಲ, 2 ದಿನ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 18: ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದರೂ ಸೆಪ್ಟೆಂಬರ್ 18 ಮತ್ತು 19ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 19ರಂದು ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂಗಾರು ದುರ್ಬಲ, 2 ದಿನ ಸಾಧಾರಣ ಮಳೆ ಸಾಧ್ಯತೆ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕಾಣಿಸಿದ ಮೋಡ (ಸಾಂದರ್ಭಿಕ ಚಿತ್ರ)Image Credit source: PTI
ಗಣಪತಿ ಶರ್ಮಾ
|

Updated on: Sep 18, 2026 | 6:34 AM

Share

ಮುಖ್ಯಾಂಶಗಳು

  • ಸೆಪ್ಟೆಂಬರ್ 18ರಂದು ಹಲವು ಜಿಲ್ಲೆಗಳಲ್ಲಿ ಮಳೆ
  • ಸೆಪ್ಟೆಂಬರ್ 19ರಂದು ಮಳೆಯ ಜೊತೆಗೆ ಗಾಳಿ
  • ಉಡುಪಿಯಲ್ಲಿ ರಾಜ್ಯದ ಗರಿಷ್ಠ ಮಳೆ ದಾಖಲು

ಬೆಂಗಳೂರು, ಸೆಪ್ಟೆಂಬರ್ 18: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಕರ್ನಾಟಕ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು.

ಬೆಂಗಳೂರು ನಗರದಲ್ಲೂ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 19ರಂದು ಗಾಳಿ ಮಳೆಯ ಮುನ್ಸೂಚನೆ

ಸೆಪ್ಟೆಂಬರ್ 19ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು.

ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಕರ್ನಾಟಕದ ಕೆಲವೆಡೆ ಹಾಗೂ ಒಳನಾಡಿನ ಒಂದು ಅಥವಾ ಎರಡು ಕಡೆಗಳಲ್ಲಿ ಮಳೆಯಾಗಿದೆ. ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಎಂಬ ವಿವರ ಇಲ್ಲಿದೆ;

  • ಉಡುಪಿ ಜಿಲ್ಲೆಯ ಉಡುಪಿ ಪಟ್ಟಣ: 3 ಸೆಂ.ಮೀ.
  • ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೀಕ್ಷಣಾಲಯ: 2 ಸೆಂ.ಮೀ.
  • ತುಮಕೂರು ಜಿಲ್ಲೆಯ ತಿಪಟೂರು: 2 ಸೆಂ.ಮೀ.
  • ಮೈಸೂರು ಜಿಲ್ಲೆಯ ಸರಗೂರು: 1 ಸೆಂ.ಮೀ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್