AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ: ಬೆಂಗಳೂರು, ಕೋಲಾರಕ್ಕೆ ಯೆಲ್ಲೋ ಅಲರ್ಟ್

Karnataka Weather forecast: ಕರ್ನಾಟಕದಲ್ಲಿ ಅಕ್ಟೋಬರ್ 23 ಮತ್ತು 24ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ: ಬೆಂಗಳೂರು, ಕೋಲಾರಕ್ಕೆ ಯೆಲ್ಲೋ ಅಲರ್ಟ್
ಚಿಕ್ಕಮಗಳೂರಿನಲ್ಲಿ ಗುರುವಾರ ಸಂಜೆ ಸುರಿದ ಮಳೆ
ಗಣಪತಿ ಶರ್ಮಾ
|

Updated on: Oct 23, 2026 | 7:25 AM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ
  • ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
  • ಮೈಸೂರು, ಚಾಮರಾಜನಗರದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 23 ಮತ್ತು 24ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ಈ ನಡುವೆ ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ಮಳೆ

ಅಕ್ಟೋಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಿಂದ ಮಧ್ಯಮ ಮಳೆ ಹಾಗೂ ಗುಡುಗು ಕಾಣಿಸಿಕೊಳ್ಳಬಹುದು. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

ಅಕ್ಟೋಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗಬಹುದು.

ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?

ಅಕ್ಟೋಬರ್ 23ರಂದು ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಅಕ್ಟೋಬರ್ 24ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಅಕ್ಟೋಬರ್ 23ರಂದು ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿಯೂ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಕ್ಟೋಬರ್ 24ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಿಂದ ಮಧ್ಯಮ ಮಳೆಯಾಗಬಹುದು. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಮಳೆ

ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಬೆಂಗಳೂರು ಸೇರಿದಂತೆ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಒಣ ಹವಾಮಾನ ಮುಂದುವರಿದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ