
ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 23 ಮತ್ತು 24ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ಈ ನಡುವೆ ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಿಂದ ಮಧ್ಯಮ ಮಳೆ ಹಾಗೂ ಗುಡುಗು ಕಾಣಿಸಿಕೊಳ್ಳಬಹುದು. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಅಕ್ಟೋಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗಬಹುದು.
ಅಕ್ಟೋಬರ್ 23ರಂದು ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ಅಕ್ಟೋಬರ್ 24ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ಅಕ್ಟೋಬರ್ 23ರಂದು ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿಯೂ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಅಕ್ಟೋಬರ್ 24ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಿಂದ ಮಧ್ಯಮ ಮಳೆಯಾಗಬಹುದು. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಬೆಂಗಳೂರು ಸೇರಿದಂತೆ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಒಣ ಹವಾಮಾನ ಮುಂದುವರಿದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ