AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಮತ್ತು ಈ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 2: ಕರ್ನಾಟಕದಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ವರ್ಷಧಾರೆಯಾಗುವ ಸಾಧ್ಯತೆಯಿದೆ.

Karnataka Weather Forecast: ಕರಾವಳಿ ಮತ್ತು ಈ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on: Sep 02, 2026 | 6:47 AM

Share

ಬೆಂಗಳೂರು, ಸೆಪ್ಟೆಂಬರ್ 2: ರಾಜ್ಯದಲ್ಲಿ ಮುಂಗಾರು ಸಾಧಾರಣವಾಗಿದ್ದು, ಸೆಪ್ಟೆಂಬರ್ 2 ಮತ್ತು 3ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 2ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದ್ದು, ಜತೆಗೆ ಮಳೆಯಾಗಬಹುದು.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಸೆಪ್ಟೆಂಬರ್ 3ರಂದು ಎಲ್ಲೆಲ್ಲಿ ಮಳೆ?

ಸೆಪ್ಟೆಂಬರ್ 3ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡು ಕರ್ನಾಟಕದಲ್ಲಿ ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 4 ಸೆಂ.ಮೀ., ಉಡುಪಿ ಜಿಲ್ಲೆಯ ಕೋಟಾದಲ್ಲಿ 4 ಸೆಂ.ಮೀ., ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 3 ಸೆಂ.ಮೀ., ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 3 ಸೆಂ.ಮೀ. ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು