AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಆಗಸ್ಟ್ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 10 ಮತ್ತು 11ರಂದು ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ
ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಭಾನುವಾರ ಸುರಿದ ಮಳೆImage Credit source: tv9
ಗಣಪತಿ ಶರ್ಮಾ
|

Updated on: Aug 10, 2026 | 7:22 AM

Share

ಮುಖ್ಯಾಂಶಗಳು

  • ಕರಾವಳಿಯಲ್ಲಿ ಬಹುತೇಕ ಕಡೆ ಮಳೆ ಸಾಧ್ಯತೆ
  • ಆಗಸ್ಟ್ 11ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
  • ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 10: ಕರ್ನಾಟಕದಲ್ಲಿ ತಡವಾಗಿ ಚುರುಕಾಗಿರುವ ಮುಂಗಾರು ಮಳೆ (Monsoon Rain) ಸದ್ಯ ಕಳೆದ ಕೆಲವು ದಿನಗಳಿಂದ ಚುರುಕಾಗಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆಯನ್ನು (Weather Forecast) ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಕರಾವಳಿಯಲ್ಲಿ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಬಹುತೇಕ ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆಗಸ್ಟ್ 11ರಂದು ಹೇಗಿರಲಿದೆ ಮಳೆ?

ಆಗಸ್ಟ್ 11ರಂದು ಕೂಡ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆ

ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 6 ಸೆಂ.ಮೀ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿ, ಇತರ ನಗರಗಳ ಸ್ಥಿತಿ ಹೇಗಿದೆ?

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ಕರಾವಳಿಯಲ್ಲಿ ಬಹುತೇಕ ಕಡೆ, ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!