
ಬೆಂಗಳೂರು, ಆಗಸ್ಟ್ 11: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಇದೀಗ ತುಸು ದುರ್ಬಲವಾಗಿದ್ದರೂ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast), ಇಂದು (ಆಗಸ್ಟ್ 11) ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30–40 ಕಿ.ಮೀ ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ 30–40 ಕಿ.ಮೀ ವೇಗದ ಗಾಳಿಯೂ ಬೀಸಬಹುದು.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗಗಳಲ್ಲೂ 30–40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ನಾಳೆ (ಆಗಸ್ಟ್ 12) ಕೂಡ ಕರಾವಳಿ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸೋಮವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 5 ಸೆಂ.ಮೀ, ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ 4 ಸೆಂ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲೂ 3 ಸೆಂ.ಮೀ ಮಳೆ ದಾಖಲಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ 21ರಷ್ಟು ಕಡಿಮೆ ಸುರಿದ ವರ್ಷಧಾರೆ
ಒಟ್ಟಾರೆ, ಮುಂದಿನ ಎರಡು ದಿನಗಳಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ