ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿಯಲ್ಲಿ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಮಳೆ ಸಾಧ್ಯತೆ
ಕರ್ನಾಟಕ ಮಳೆ ಮುನ್ಸೂಚನೆ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ವಿವರ ಇಲ್ಲಿದೆ.

ಮುಖ್ಯಾಂಶಗಳು
- ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ
- ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ನಾಪೋಕ್ಲುವಿನಲ್ಲಿ ನಾಲ್ಕು ಸೆಂ.ಮೀ ಮಳೆ ದಾಖಲು
ಬೆಂಗಳೂರು, ಅಕ್ಟೋಬರ್ 3: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಕ್ಟೋಬರ್ 3ರಂದು ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಬೆಂಗಳೂರು ನಗರದಲ್ಲಿಯೂ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಒಣಹವೆ?
ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಅಕ್ಟೋಬರ್ 4 ರಂದೂ ಮಳೆ ಮುನ್ಸೂಚನೆ
ಅಕ್ಟೋಬರ್ 4ರಂದು ಕೂಡ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮುಂಗಾರು ಸ್ಥಿತಿಗತಿ
ರಾಜ್ಯದಲ್ಲಿ ಶುಕ್ರವಾರ ಸಂಜೆಗೆ ಕೊನೆಗೊಂಡಂತೆ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಈ ಅವಧಿಯಲ್ಲಿ ರಾಜ್ಯದ ಒಂದೆರಡು ಕಡೆ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ 4 ಸೆಂ.ಮೀ., ಭಾಗಮಂಡಲದಲ್ಲಿ 3 ಸೆಂ.ಮೀ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 3 ಸೆಂ.ಮೀ. ಮಳೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:19 am, Sat, 3 October 26




