ಕರ್ನಾಟಕ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಅಕ್ಟೋಬರ್ 2: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 2 ಮತ್ತು 3ರಂದು ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು ಮಳೆ (ಸಾಂದರ್ಭಿಕ ಚಿತ್ರ)
Image Credit source: PTI

Updated on: Oct 02, 2026 | 6:46 AM

ಮುಖ್ಯಾಂಶಗಳು

  • ಕರಾವಳಿಯ ಹಲವೆಡೆ ಮಳೆ ಸಾಧ್ಯತೆ
  • ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
  • ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗಾಳಿ ಮುನ್ಸೂಚನೆ

ಬೆಂಗಳೂರು, ಅಕ್ಟೋಬರ್ 2: ಕರ್ನಾಟಕದ ಹಲವೆಡೆ ಅಕ್ಟೋಬರ್ 2 ಮತ್ತು 3ರಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.

ಮಳೆ ಮುನ್ಸೂಚನೆ ಎಕ್ಸ್ ಸಂದೇಶ


ಅಕ್ಟೋಬರ್ 3ರಂದು ಸಹ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

ಅಕ್ಟೋಬರ್ 3ರಂದು ಕೂಡ ಇದೇ ರೀತಿಯ ಹವಾಮಾನ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us