Karnataka Rain: ಕರ್ನಾಟಕದಲ್ಲಿ ಜೂನ್ 11ರಿಂದ ಮತ್ತೆ ಮಳೆ ಆರ್ಭಟ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್
ಕರ್ನಾಟಕದಲ್ಲಿ ಈ ಬಾರಿ ಅವಧಿಗೂ ಮುನ್ನವೇ ಮಳೆಗಾಲ ಶುರುವಾಗಿತ್ತು. ಮೇ ಅಂತ್ಯದಲ್ಲೇ ರಾಜ್ಯಕ್ಕೆ ಮಾನ್ಸೂನ್ ಪ್ರವೇಶಿಸಿತ್ತು. ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಕಡಿಮೆಯಾಗಿ ಬಿಸಿಲು ಹೆಚ್ಚಾಗಿದೆ. ಇನ್ನು, ಜೂನ್ 11ರಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಜೂ.7: ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ ಜೂನ್ ಮೊದಲ ವಾರದವರೆಗೂ ಅಬ್ಬರಿಸಿದ್ದ ಮಳೆರಾಯ ಇದೀಗ ಶಾಂತನಾಗಿದ್ದಾನೆ. ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಾಗಿದೆ. ಕರ್ನಾಟಕದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ (Monsoon 2025) ಅಬ್ಬರ ಹೆಚ್ಚಾಗಲಿದೆ. ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್ 9ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂ.11ರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಕಡೆ ಮಳೆ, ಜೂನ್ 10ರ ಬಳಿಕ ಮಳೆ ಹೆಚ್ಚಳ
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ:
ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
During 0830 hrs IST of yesterday-0530 hrs IST of today, the 07th June, heavy rainfall reported coastal Odisha (Chandbali 8cm) and moderate rainfall over coastal Maharashtra (Ratnagiri 3cm, Santacruz 2cm), Madhya Maharashtra(Nashil 2cm, Pune 2 cm), Gangetic West Bengal (Kolkata… pic.twitter.com/iZvAQF4gaD
— India Meteorological Department (@Indiametdept) June 7, 2025
ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್:
ವಿಶೇಷವಾಗಿ ರಾಜಸ್ಥಾನಕ್ಕೆ ಉಷ್ಣ ಅಲೆಯ ಎಚ್ಚರಿಕೆಯನ್ನೂ ನೀಡಲಾಗಿದೆ. ಹಾಗೇ, ಮಹಾರಾಷ್ಟ್ರದಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂಬೈ ಮತ್ತು ಮಹಾರಾಷ್ಟ್ರದ ಹಲವಾರು ಭಾಗಗಳಿಗೆ ರೆಡ್ ಅಲರ್ಟ್ ನೀಡಿದೆ. ಇಂದು ಘೋಷಿಸಲಾದ ಈ ಎಚ್ಚರಿಕೆಯು ಆಲಿಗೋ ಸೈಕ್ಲೋನಿಕ್ ಪರಿಸ್ಥಿತಿಗಳು ಮತ್ತು ದುರ್ಬಲವಾದ ನೈಋತ್ಯ ಮಾನ್ಸೂನ್ ಗಾಳಿಯು ಈ ಪ್ರದೇಶದ ಮೇಲೆ ಪರಿಣಾಮ ಬೀರುವುದರಿಂದ ಮುಂಬರುವ ದಿನಗಳಲ್ಲಿ ತೀವ್ರ ಹವಾಮಾನ ಪರಿಸ್ಥಿತಿಗಳ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ
ಬೆಂಗಳೂರು, ಮುಂಬೈ, ದೆಹಲಿ/ಎನ್‌ಸಿಆರ್, ಕೊಲ್ಕತ್ತಾ, ಚೆನ್ನೈ, ಅಸ್ಸಾಂ, ಒಡಿಶಾದಲ್ಲಿ ಕೂಡ ಭಾರೀ ಮಳೆಯಾಗಲಿದೆ. ಜೂನ್ 8ರಂದು ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ, ಜೂನ್ 11 ಮತ್ತು 12ರಂದು ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಈ ರಾಜ್ಯಗಳಲ್ಲಿ ಮಳೆ:
ಮುಂದಿನ 7 ದಿನಗಳಲ್ಲಿ ಈಶಾನ್ಯ ಭಾರತದ ಬಹುತೇಕ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 12ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಏಕಾಏಕಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 9ರಿಂದ 11ರವರೆಗೆ ತ್ರಿಪುರದಲ್ಲಿ ಮಳೆಯಾಗುವ ನಿರೀಕ್ಷೆಯಿದ್ದರೆ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಜೂನ್ 11ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 7 ದಿನಗಳಲ್ಲಿ ಕೇರಳ ಮತ್ತು ಮಾಹೆ, ಕರಾವಳಿ ಕರ್ನಾಟಕದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10ರವರೆಗೆ ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ