Karnataka Weather Report: ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷೆ; ರಾಜ್ಯದ ಹವಾಮಾನ ವರದಿ ಇಲ್ಲಿದೆ
ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ ಹಾಗೂ ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ. ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಗಾಳಿಯೂ ಮೀನುಗಾರಿಕೆಗೆ ಸಮಸ್ಯೆ ತಂದೊಡ್ಡಬಹುದು ಎಂದು ಹೇಳಲಾಗಿದೆ.
ಬೆಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಅಥವಾ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಪ್ರದೇಶದಲ್ಲಿ ಅತಿಯಾದ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ಲಭ್ಯವಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಂಭವ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ (ಜುಲೈ 10) ಮುಂದಿನ 48 ಗಂಟೆಗಳಿಗೆ ಕರಾವಳಿ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿತ್ತು. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು.
ಕರಾವಳಿ ಕರ್ನಾಟಕದ ಭಾಗವಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದರು.
ರೆಡ್ ಅಲರ್ಟ್ ಎಂದರೆ ಅತಿಯಾದ ಮಳೆ ಸಂಭವ ಇದೆ ಎಂದು, ಆರೆಂಜ್ ಅಲರ್ಟ್ ಎಂದರೆ ಚದುರಿದ ಪ್ರದೇಶಗಳಲ್ಲಿ ಭಾರಿ ಮಳೆ ನಿರೀಕ್ಷೆ ಎಂದು ಹಾಗೂ ಯೆಲ್ಲೋ ಅಲರ್ಟ್ ಎಂದರೆ ಉತ್ತಮ ಮಳೆಯಾಗುವ ಸಾಧ್ಯತೆ ಎಂದು ಹೇಳಲಾಗುತ್ತದೆ.
Rainfall Forecast: (1/2) Widespread moderate to heavy rains and at isolated places very heavy rains likely over Coastal, widespread light to moderate rains with isolated heavy rains likely over Malnad districts pic.twitter.com/CQj5DQzP8o
— KSNDMC (@KarnatakaSNDMC) July 11, 2021
ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ ಹಾಗೂ ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ. ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಗಾಳಿಯೂ ಮೀನುಗಾರಿಕೆಗೆ ಸಮಸ್ಯೆ ತಂದೊಡ್ಡಬಹುದು ಎಂದು ಹೇಳಲಾಗಿದೆ.
ಇದನ್ನೂ ಓದಿ: Monsoon 2021: ದೆಹಲಿಗೆ ಇಂದು ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಇಂದಿನಿಂದ ತೀವ್ರಗೊಳ್ಳಲಿದೆ ಮಳೆ
Published On - 6:06 pm, Sun, 11 July 21