Karnataka Weather: ಬೆಂಗಳೂರು ಸೇರಿ ಹಲವೆಡೆ ಅ.22ರವರೆಗೂ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ 22ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಯಲ್ಲಿ ನಾಳೆವರೆಗೂ ಮಳೆ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಖ್ಯಾಂಶಗಳು
- ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ
- ಅಕ್ಟೋಬರ್ 22ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ
- ಮುಂಜಾಗ್ರತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದೆ. ಹೀಗಾಗಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರಗೆ ವರ್ಷಧಾರೆ ಮುಂದುವರಿಕೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಬಹುತೇಕ ಭಾಗದಲ್ಲಿ ಸುರಿಯುತ್ತಿರುವ ಮಳೆ
ಇನ್ನು ನಿನ್ನೆ ಸುರಿದ ಮಳೆ ಬೆಂಗಳೂರಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದಿದ್ದ. ನಗರದ ಬಹುತೇಕ ಭಾಗದಲ್ಲಿ ಮಳೆ ಮುಂದುವರೆದಿದೆ. ಇಂದು ಕೂಡ ನಗರದ ಹಲವೆಡೆ ಮಳೆ ಆಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಟ್ವೀಟ್
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ (ಮೂಲ: IMD): ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ ಹಾಗೂ https://t.co/B4bXXMDair
— Karnataka State Natural Disaster Monitoring Centre (@KarnatakaSNDMC) October 16, 2026
ಕರಾವಳಿ ಕರ್ನಾಟಕ ಭಾಗದಲ್ಲಿ ಅಂದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿಯಾಗಿ ಅಕ್ಟೋಬರ್ 20, 21 ಮತ್ತು 22ರಂದು ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಭಾಗದ ಹಲವು ಕಡೆಗಳಲ್ಲಿ ಮಳೆ ಸಾಧ್ಯತೆ
ಬೆಳಗಾವಿ ಧಾರವಾಡ, ಹಾವೇರಿ, ಬಾಗಲಕೋಟೆ, ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಅಕ್ಟೋಬರ್ 16, 17, 18, 20, 21 ಮತ್ತು 22ರಂದು ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಅಕ್ಟೋಬರ್ 19 ರಂದು ಉತ್ತರ ಒಳನಾಡು ಭಾಗದ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿ ಹಲವೆಡೆ ಭಾರೀ ಮಳೆ ಸಾಧ್ಯತೆ
ಚಾಮರಾಜನಗರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 17ರಿಂದ 22ರ ವರೆಗೆ ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




