Karnataka Weather: ಬೆಂಗಳೂರು ಸೇರಿ ಹಲವೆಡೆ ಅ.22ರವರೆಗೂ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ 22ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಯಲ್ಲಿ ನಾಳೆವರೆಗೂ ಮಳೆ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Karnataka Weather: ಬೆಂಗಳೂರು ಸೇರಿ ಹಲವೆಡೆ ಅ.22ರವರೆಗೂ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆಗೆ ಜಲಾವೃತಗೊಂಡ ರಸ್ತೆ
Edited By:

Updated on: Oct 16, 2026 | 6:26 PM

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ
  • ಅಕ್ಟೋಬರ್ 22ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ
  • ಮುಂಜಾಗ್ರತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಅಕ್ಟೋಬರ್​ 16: ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದೆ. ಹೀಗಾಗಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್​​ 22ರವರಗೆ ವರ್ಷಧಾರೆ ಮುಂದುವರಿಕೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಬಹುತೇಕ ಭಾಗದಲ್ಲಿ ಸುರಿಯುತ್ತಿರುವ ಮಳೆ

ಇನ್ನು ನಿನ್ನೆ ಸುರಿದ ಮಳೆ ಬೆಂಗಳೂರಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದಿದ್ದ. ನಗರದ ಬಹುತೇಕ ಭಾಗದಲ್ಲಿ ಮಳೆ ಮುಂದುವರೆದಿದೆ. ಇಂದು ಕೂಡ ನಗರದ ಹಲವೆಡೆ ಮಳೆ ಆಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಟ್ವೀಟ್​

ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ (ಮೂಲ: IMD): ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ ಹಾಗೂ https://t.co/B4bXXMDair

ಕರಾವಳಿ ಕರ್ನಾಟಕ ಭಾಗದಲ್ಲಿ ಅಂದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್​​ 17, 18 ಮತ್ತು 19ರಂದು ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿಯಾಗಿ ಅಕ್ಟೋಬರ್​​ 20, 21 ಮತ್ತು 22ರಂದು ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಭಾಗದ ಹಲವು ಕಡೆಗಳಲ್ಲಿ ಮಳೆ ಸಾಧ್ಯತೆ 

ಬೆಳಗಾವಿ ಧಾರವಾಡ, ಹಾವೇರಿ, ಬಾಗಲಕೋಟೆ, ರಾಯಚೂರು, ಗದಗ, ಕೊಪ್ಪಳ, ಬೀದರ್​​​​, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಅಕ್ಟೋಬರ್​​ 16, 17, 18, 20, 21 ಮತ್ತು 22ರಂದು ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಅಕ್ಟೋಬರ್​​ 19 ರಂದು ಉತ್ತರ ಒಳನಾಡು ಭಾಗದ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿ ಹಲವೆಡೆ ಭಾರೀ ಮಳೆ ಸಾಧ್ಯತೆ

ಚಾಮರಾಜನಗರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್​​ 17ರಿಂದ 22ರ ವರೆಗೆ ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
Loading...
Unable to load recommendations.
Follow Us