
ಬೆಂಗಳೂರು, ಸೆ.3: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬೆಳಗಿನ ಜಾವ ಇಬ್ಬನಿ ಮತ್ತು ತಂಪಾದ ಗಾಳಿ ಇರಲಿದ್ದು, ಮಧ್ಯಾಹ್ನದ ವೇಳೆಗೆ ಒಣ ಹವಾಮಾನ ಹಾಗೂ ಸಂಜೆ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಕಲ್ಬುರ್ಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಬಿಸಿಲ ವಾತಾವರಣ ಮುಂದುವರಿಯಲಿದೆ. ಸಮುದ್ರದಲ್ಲಿ ಗಾಳಿಯ ವೇಗ ಸಾಧಾರಣವಾಗಿದ್ದು, ಮೀನುಗಾರರಿಗೆ ಯಾವುದೇ ಪ್ರಮುಖ ಎಚ್ಚರಿಕೆಯನ್ನು ನೀಡಲಾಗಿಲ್ಲ.
ದಕ್ಷಿಣ ಒಳನಾಡು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನ ಜಾವ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ತಂಪಾದ ಹಿತಕರ ಗಾಳಿ ಬೀಸಲಿದೆ. ಕೆಲವೆಡೆ ಹಗುರವಾದ ಇಬ್ಬನಿ ಅನುಭವವಾಗಲಿದೆ. ಮಂಗಳೂರು, ಉಡುಪಿ, ಕಾರವಾರ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿರಲಿದೆ. ಸಂಜೆಯ ವೇಳೆಗೆ ವಾತಾವರಣ ಬದಲಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಂಜೆಯಾಗುತ್ತಿದ್ದಂತೆ ಗಾಳಿಯ ವೇಗ ಹೆಚ್ಚಾಗಲಿದ್ದು, ಶೀತಲ ವಾತಾವರಣ ಆವರಿಸಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಅಲ್ಲಲ್ಲಿ ಹಗುರ ತುಂತುರು ಮಳೆಯಾಗಬಹುದು.
ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ‘ಗೋಲ್ಡ್ ಸ್ಕ್ಯಾಮ್’: ಮೋಹನ್ ಜ್ಯುವೆಲರಿಯಿಂದ ನೂರಾರು ಗ್ರಾಹಕರಿಗೆ ಮೋಸ
ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬೆಳಗಿನ ಜಾವ ಸಾಧಾರಣ ತಂಪು ಇರಲಿದ್ದು, ಸೂರ್ಯೋದಯದ ನಂತರ ಒಣ ಹವಾಮಾನ ಕಂಡುಬರಲಿದೆ. ಸಂಜೆ ವೇಳೆ ಮೋಡಗಳ ಸಂಚಾರವಿರಲಿದ್ದು, ಹೆಚ್ಚಿನ ಭಾಗಗಳಲ್ಲಿ ಒಣ ಹಾಗೂ ತಂಪಾದ ವಾತಾವರಣ ಮುಂದುವರಿಯಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ