ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್
ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಮುಖ್ಯಾಂಶಗಳು
- ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
- 30-40 ಕಿ.ಮೀ. ವೇಗದ ಗಾಳಿ ಸಾಧ್ಯತೆ
- ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕು
ಬೆಂಗಳೂರು, ಅಕ್ಟೋಬರ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹವಾಮಾನ ಮುನ್ಸೂಚನೆ ನೀಡಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 1ರಂದು ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.
ಮಳೆ ಮುನ್ಸೂಚನೆಯ ಎಕ್ಸ್ ಸಂದೇಶ
#ಮಳೆ #ಮುನ್ನೆಚ್ಚರಿಕೆ :#Heavy #rainfall (64.5mm to 115.4mm) #Warning for #Karnataka #Yellow #Alert@KarnatakaVarthe #KSNDMC #KarnatakaRains #SouthwestMonsoon pic.twitter.com/42XDqiEJjd
— Karnataka State Natural Disaster Monitoring Centre (@KarnatakaSNDMC) September 30, 2026
ಉತ್ತರ ಒಳನಾಡು ಕರ್ನಾಟಕ
ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕು
ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿತ್ತು. ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಕರ್ನಾಟಕದಲ್ಲಿ ಒಣಹವೆ ಮುಂದುವರಿದಿತ್ತು. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.
ತುಮಕೂರು ಜಿಲ್ಲೆಯ ಕಿಬ್ಬನಹಳ್ಳಿಯಲ್ಲಿ 10 ಸೆಂ.ಮೀ., ಚಿಕ್ಕನಹಳ್ಳಿಯಲ್ಲಿ 9 ಸೆಂ.ಮೀ. ಹಾಗೂ ಸಿರಾದಲ್ಲಿ 9 ಸೆಂ.ಮೀ. ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಯಗಟಿಯಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




