ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ ಕರ್ನಾಟಕದಲ್ಲಿ ಸಾಧಾರಣೆ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 7: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿರುವುದು ಕಂಡುಬಂದಿದೆ. ಆದಾಗ್ಯೂ ಸೆಪ್ಟೆಂಬರ್ 7 ಮತ್ತು 8ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಗಾಳಿಯ ಮುನ್ಸೂಚನೆ ಇದೆ. ಎಲ್ಲೆಲ್ಲಿ ಮಳೆಯಾಗಲಿದೆ? ಯಾವ ಜಿಲ್ಲೆಯಲ್ಲಿ ಗಾಳಿಯ ಅಬ್ಬರ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ ಕರ್ನಾಟಕದಲ್ಲಿ ಸಾಧಾರಣೆ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Sep 07, 2026 | 8:36 AM

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಮುಂಗಾರು ದುರ್ಬಲ
  • ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
  • ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಮುಂದುವರಿಕೆ

ಬೆಂಗಳೂರು, ಸೆಪ್ಟೆಂಬರ್ 7: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಆದಾಗ್ಯೂ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 4 ಸೆಂ.ಮೀ ಮಳೆಯಾಗಿದ್ದು, ಯಾದಗಿರಿ ಜಿಲ್ಲೆಯ ಕಕ್ಕೇರಿ 3 ಸೆಂ.ಮೀ ಮಳೆ ಪಡೆದಿದೆ. ಹುಣಸಗಿ, ಗದಗ ಹಾಗೂ ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಇದೇ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸಬಹುದು.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಸೆಪ್ಟೆಂಬರ್ 8ರಂದು ಎಲ್ಲೆಲ್ಲಿ ಮಳೆ ಮುನ್ಸೂಚನೆ?

ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಮಳೆಯಾಗಿರುವುದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲಿದೆ;

  • ಚನ್ನರಾಯಪಟ್ಟಣ, ಹಾಸನ: 4 ಸೆಂ.ಮೀ
  • ಕಕ್ಕೇರಿ, ಯಾದಗಿರಿ: 3 ಸೆಂ.ಮೀ
  • ಹುಣಸಗಿ, ಯಾದಗಿರಿ: 1 ಸೆಂ.ಮೀ
  • ಗದಗ ಪಿಬಿಒ ಅಬ್ಸರ್ವೇಟರಿ: 1 ಸೆಂ.ಮೀ
  • ತೀರ್ಥಹಳ್ಳಿ, ಶಿವಮೊಗ್ಗ: 1 ಸೆಂ.ಮೀ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 am, Mon, 7 September 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us