ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದಿನ ಎರಡು ದಿನ ಚಳಿ ಹೆಚ್ಚಳ ಸಾಧ್ಯತೆ, ವಿಜಯಪುರದಲ್ಲಿ 12.9 ಡಿಗ್ರಿ ಕನಿಷ್ಠ ತಾಪಮಾನ

ಕರ್ನಾಟಕದಲ್ಲಿ ಒಣಹವೆಯ ವಾತಾವರಣ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ. ವಿಜಯಪುರದಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕಡಿಮೆ 12.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆಯ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದಿನ ಎರಡು ದಿನ ಚಳಿ ಹೆಚ್ಚಳ ಸಾಧ್ಯತೆ, ವಿಜಯಪುರದಲ್ಲಿ 12.9 ಡಿಗ್ರಿ ಕನಿಷ್ಠ ತಾಪಮಾನ
ಸಾಂದರ್ಭಿಕ ಚಿತ್ರ

Updated on: Nov 20, 2026 | 6:50 AM

ಮುಖ್ಯಾಂಶಗಳು

  • ಮುಂದಿನ ಎರಡು ದಿನ ಕನಿಷ್ಠ ತಾಪಮಾನ ಇಳಿಕೆ
  • ವಿಜಯಪುರದಲ್ಲಿ 12.9 ಡಿಗ್ರಿ ಕನಿಷ್ಠ ತಾಪಮಾನ ದಾಖಲು
  • ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಣಹವೆಯ ಮುನ್ಸೂಚನೆ

ಬೆಂಗಳೂರು, ನವೆಂಬರ್ 20: ರಾಜ್ಯದಲ್ಲಿ ಸದ್ಯ ಒಣಹವೆಯ ವಾತಾವರಣ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಂತರದ ದಿನಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 12.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ.

ಕರಾವಳಿ ಕರ್ನಾಟಕದಲ್ಲಿ ಒಣಹವೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಮುನ್ಸೂಚನೆ ಇಲ್ಲದೆ ಒಣಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Loading...

ಉತ್ತರ ಒಳನಾಡಿನ ಜಿಲ್ಲೆಗಳ ಹವಾಮಾನ

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನಲ್ಲೂ ಒಣ ಹವೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಆಂಧ್ರ, ಒಡಿಶಾ ಕರಾವಳಿಗೆ ಅಕ್ವಾನ್ ಚಂಡಮಾರುತದ ಆತಂಕ

ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಭಾಗದಲ್ಲಿರುವ ‘ಅಕ್ವಾನ್’ ಚಂಡಮಾರುತ ಉತ್ತರದ ಕಡೆಗೆ ಚಲಿಸುತ್ತಿದೆ. ಗಂಟೆಗೆ ಸುಮಾರು 15 ಕಿ.ಮೀ. ವೇಗದಲ್ಲಿ ಚಲಿಸುತ್ತಿರುವ ಚಂಡಮಾರುತವು ನವೆಂಬರ್ 19ರ ಬೆಳಗ್ಗೆ 8.30ರ ವೇಳೆಗೆ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿತ್ತು. ಇಂದು (ನವೆಂಬರ್ 20ರ) ಮಧ್ಯಾಹ್ನದ ವೇಳೆಗೆ ಉತ್ತರ ಆಂಧ್ರಪ್ರದೇಶ ಮತ್ತು ಯಾನಂ ಹಾಗೂ ದಕ್ಷಿಣ ಒಡಿಶಾ ಕರಾವಳಿಯ ನಡುವೆ, ಗೋಪಾಲಪುರದ ಪೂರ್ವ ಭಾಗದ ಸಮೀಪ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಸೈಕ್ಲೋನ್, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನಿಖರ ಮುನ್ಸೂಚನೆ ಹೇಗೆ ಸಾಧ್ಯ?: ಐಎಂಡಿ ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಈ ವೇಳೆ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗಾಳಿಯ ವೇಗ ಗಂಟೆಗೆ 110 ಕಿ.ಮೀ.ವರೆಗೆ ತಲುಪಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಇದಲ್ಲದೆ, ಆಗ್ನೇಯ ಅರಬ್ಬಿ ಸಮುದ್ರ ಮತ್ತು ದಕ್ಷಿಣ ಲಕ್ಷದ್ವೀಪದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us